Sunday, May 24, 2026
Flats for sale
Homeಜಿಲ್ಲೆಭಟ್ಕಳ : ಉತ್ತರಕನ್ನಡದಲ್ಲಿ ದಾರುಣ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ನೀರಲ್ಲಿ ಮುಳುಗಿ...

ಭಟ್ಕಳ : ಉತ್ತರಕನ್ನಡದಲ್ಲಿ ದಾರುಣ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ನೀರಲ್ಲಿ ಮುಳುಗಿ ಸಾವು.

ಭಟ್ಕಳ : ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟಿಹಕ್ಲ ಸಮೀಪ ಭೀಕರ ದುರಂತ ಸಂಭವಿಸಿದ್ದು, ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ಎಂಟು ಮಂದಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭಟ್ಕಳದ ವೆಂಕಟಾಪುರ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರು ಶಿರಾಲಿಯ ಸಾರದಹೊಳೆ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟು 14 ಮಂದಿ ಗುಂಪಾಗಿ ಕಪ್ಪೆಚಿಪ್ಪು ತೆಗೆಯಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮೂವರು ನದಿಯಲ್ಲಿ ನಾಪತ್ತೆಯಾಗಿದ್ದು, ಇನ್ನೂ ಮೂವರನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಲ್ಪಟ್ಟವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular