ಮಂಗಳೂರು : ಮಂಗಳೂರು ಉತ್ತರ (ಬಂದರ್) ಪೊಲೀಸ್ ಠಾಣೆಯಲ್ಲಿ ಕಳೆದ ಸುಮಾರು ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಮಡಿಕೇರಿ ಮೂಲದ ಮದನ್ ಅಯ್ಯಪ್ಪ ಅವರು ಅಸಿಸ್ಟಂಟ್ ಸಬ್ ಇನ್ಸ್‌ಪೆಕ್ಟರ್ (ASI) ಆಗಿ ಪದೋನ್ನತಿ ಪಡೆದು, ಟ್ರಾಫಿಕ್ ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಬಂದರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಸಹಕರಿಸಿದ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರಿಗೆ ಮದನ್ ಅಯ್ಯಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ತಮ್ಮ ಸೇವಾವಧಿಯಲ್ಲಿ ದೊರೆತ ಸಹಕಾರ ಹಾಗೂ ಪ್ರೀತಿಯನ್ನು ಸದಾ ಸ್ಮರಿಸುವುದಾಗಿ ತಿಳಿಸಿರುವ ಅವರು, ಮುಂದೆಯೂ ಇದೇ ರೀತಿಯ ಸಹಕಾರ ಮುಂದುವರಿಯಲಿ ಎಂದು ಆಶಿಸಿದ್ದಾರೆ.
ಪದೋನ್ನತಿ ಪಡೆದು ಹೊಸ ಜವಾಬ್ದಾರಿಗೆ ತೆರಳುತ್ತಿರುವ ಮದನ್ ಅಯ್ಯಪ್ಪ ಅವರಿಗೆ ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಶುಭ ಹಾರೈಸಿದ್ದಾರೆ.

