ಮಂಗಳೂರು, ಸೆ.13: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಮಂಗಳವಾರ ಸೆ.12ರಂದು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕ ದುಬೈನಿಂದ ಬಂದಿದ್ದ.14.50 ಲಕ್ಷ ಮೌಲ್ಯದ 242 ಗ್ರಾಂ ಚಿನ್ನದ ಪುಡಿಯನ್ನು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಪ್ರಯಾಣಿಕರೊಬ್ಬರು ಚಿನ್ನದ ಪುಡಿಯನ್ನು ರಟ್ಟಿನ ಪೆಟ್ಟಿಗೆಯಲ್ಲಿ ಇಟ್ಟು ನಾಲ್ಕು ಕಾರ್ಬನ್ ಪೇಪರ್ಗಳಲ್ಲಿ ಸುತ್ತಿ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.


