ಮಂಗಳೂರು : ನಮ್ಮ ನಡೆ ಕೊರಗಜ್ಜನ ಕಡೆ ಎಂಬ ಕಾರ್ಯಕ್ರಮದ ನಿಮಿತ್ತ ಮಂಗಳೂರಿನ ಕುತ್ತಾರಿನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಷಣ ವಿವಾದ ಎಬ್ಬಿಸಿದೆ.
ಮಾರ್ಚ್ 9 ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣಮಾಡಿದ್ದರು, ಆ ಭಾಷಣದವೇಳೆ ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಪ್ರಚೋದನಕಾರಿ ಭಾಷಣ ಮಾಡಿ, ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಅಂತ ಠಾಣೆಗೆ ದೂರು ನೀಡಿದ್ದು ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಭಾಷಣ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ವಿವಾದವಾಗಿತ್ತು ಇದೀಗ ದೂರಿನ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸಲು ತಯಾರಿನಡೆಸುತ್ತಿದ್ದಾರೆ.