Monday, March 23, 2026
Flats for sale
Homeಜಿಲ್ಲೆಮಂಗಳೂರು : ಇನ್ಸ್ಪೆಕ್ಟರ್ ಸಂದೇಶ್ ಪಿ ಜಿ ಗೆ ಮತ್ತೊಂದು ಸಂಕಷ್ಟ : ವೇಣೂರು ಪೋಲಿಸ್...

ಮಂಗಳೂರು : ಇನ್ಸ್ಪೆಕ್ಟರ್ ಸಂದೇಶ್ ಪಿ ಜಿ ಗೆ ಮತ್ತೊಂದು ಸಂಕಷ್ಟ : ವೇಣೂರು ಪೋಲಿಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು.

ಮಂಗಳೂರು ; ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ ಜಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಮತ್ತೆ ಸಂಕಷ್ಟ ಶುರುವಾಗಿದೆ. ಮಹಿಳೆ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವಿಡಿಯೋ ವೈರಲ್ ಆದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿ ಬೆಂಗಳೂರಿನಲ್ಲಿ ಮೂವರು ಮಹಿಳೆಯರು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.ಆದರೆ ಇದೀಗ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಮೂಡಬಿದ್ರೆ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಸಂದೇಶ್ ಪಿ.ಜಿ ವಿರುದ್ದ ವೇಣೂರು ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ ಸಂತ್ರಸ್ಥ ಮಹಿಳೆ ಅತ್ಯಾಚಾರ ಆರೋಪದ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಮಾ 22ರಂದು ರಾತ್ರಿ 02-00 ಗಂಟೆಗೆ ವೇಣೂರು ಪೊಲೀಸ್ ಠಾಣಾ ಅಕ್ರ 22/2026 ಕಲಂ 376(2)(a)(1),376(2)(n),384,506 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂತ್ರಸ್ಥ ಮಹಿಳೆ ಎಂಬವರ ಮೇಲೆ ಮನೆಗೆ ಬಂದು ಇನ್ಸ್‌ಪೆಕ್ಟರ್ ಸಂದೇಶ್ ಬಲವಂತವಾಗಿ ಅತ್ಯಾಚಾರ ಮಾಡಿರುವ ಆರೋಪದಲ್ಲಿ ತಿಳಿಸಲಾಗಿದೆ.ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ದಾಖಲಾಗಿರುವುದು ಇದೀಗ ಇನ್ಸ್ಪೆಕ್ಟರ್ ನ ಕಾಮ ಪುರಾಣ ಬಟಾಬಯಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular