ಮಂಗಳೂರು : ಮಂಗಳೂರು ನಗರದ ಎಂಆರ್ಪಿಎಲ್ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ಅವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡಿ ಕೊನೆಯುಸಿರೆಳೆದಿದ್ದಾರೆ.
ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ವೈದ್ಯರ ಪ್ರಯತ್ನಗಳ ನಡುವೆಯೂ ವಿಧಿಯಾಟಕ್ಕೆ ಮಣಿದು ಇಹಲೋಕ ತ್ಯಜಿಸಿದ್ದಾರೆ.
ರಾಜೇಶ್ ಡಿಸಿಲ್ವ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದ್ದು, ಅವರ ಅಗಲಿಕೆಯಿಂದ ಕುಟುಂಬಸ್ಥರು ಹಾಗೂ ಆತ್ಮೀಯರಲ್ಲಿ ದುಃಖ ಮಡುಗಟ್ಟಿದೆ. ರಾಜೇಶ್ ಡಿಸಿಲ್ವ ಅವರ ಪವಿತ್ರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರಿಗೆ ಹಾಗೂ ಬಂಧುಮಿತ್ರರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದ್ದಾರೆ.

