ಮಂಗಳೂರು : ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಂಬಂಧಿಸಿದಂತೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಐವನ್ ಡಿಸೋಜಾ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು .ಈ ಬಗ್ಗೆ ಸಾಮಾಜಿಕಜಾಲತಾಣದಲ್ಲಿ ಹಲವಾರು ಆಕ್ರೋಶ ಹೊರಹಾಕಿದ್ದರು. ಇದೀಗ ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೆಸೆದಿದ್ದಾಗಿ ಆರೋಪಿಗಳು ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.
ಬಂಧಿತರನ್ನು ಭರತ್ ಅಲಿಯಾಸ್ ಯಕ್ಷಿತ್, ದಿನೇಶ್ ಕುರ್ತಮೊಗೆರು ಎಂದು ತಿಳಿದುಬಂದಿದೆ.ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಬಂಟ್ವಾಳ ತಾಲೂಕಿನ ಬೋಳಂತೂರಿನ ರಾಘವ ಭಂಡಾರಿ ಪುತ್ರ ಭರತ್, ಕನ್ಯಾನದಲ್ಲಿ ಫೈನಾನ್ಸ್ ವಸೂಲಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಆನಂದ ಪೂಜಾರಿ ಪುತ್ರ ಎಂದು ತಿಳಿದುಬಂದಿದೆ.