ಮಂಗಳೂರು : ಎಳನೀರು ಸೇವಿಸಿದ ಬಳಿಕ ವಾಂತಿ ಮತ್ತು ಭೇದಿ ಆರಂಭವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಅವರನ್ನು ಒಳಗೊಂಡ ತಂಡ ಗುರುವಾರ ಅಡ್ಯಾರ್‌ನ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ.
ಮಂಗಳೂರಿನ ಹೊರವಲಯದ ಅಡ್ಯಾರ್ ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದರು, ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದ್ದು.ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.
ಸದ್ಯ ಮಂಗಳೂರಿನ ವಿವಿಧ ಭಾಗಗಳಲ್ಲಿ ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಒಟ್ಟು 137 ಮಂದಿ ಅಸ್ವಸ್ಥರಾಗಿದ್ದು ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ ,ಈ ಬಗ್ಗೆ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


