Monday, April 6, 2026
Flats for sale
Homeಜಿಲ್ಲೆಮಂಗಳೂರು : ಏ.10 ,11 ರಂದು ಸೌತ್ ಕೆನರಾ ಫಿಸಿಯೋಥೆರಫಿ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಅಂತಾರಾಷ್ಟ್ರೀಯ...

ಮಂಗಳೂರು : ಏ.10 ,11 ರಂದು ಸೌತ್ ಕೆನರಾ ಫಿಸಿಯೋಥೆರಫಿ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಅಂತಾರಾಷ್ಟ್ರೀಯ ಭೌತ ಚಿಕಿತ್ಸೆಯ ಸಮ್ಮೇಳನ.

ಮಂಗಳೂರು : ಸೌತ್ ಕೆನರಾ ಫಿಸಿಯೋಥೆರಫಿ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ಎ.10 ಮತ್ತು 11ರಂದು ಆಂತಾರಾಷ್ಟ್ರೀಯ ಭೌತ ಚಿಕಿತ್ಸೆಯ ಸಮ್ಮೇಳನ ‘ಮಂಗಳೂರು ಫಿಸಿಯೋಕಾನ್-2026’ ಕಾರ್ಯಕ್ರಮ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಲಿದೆ.

ಈ ಬಗ್ಗೆ ಶನಿವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ನ ಅಧ್ಯಕ್ಷ ಡಾ| ಯು.ಟಿ. ಇಫ್ತಿಕರ್ ಫರೀದ್ ಅವರು ಮಾಹಿತಿ ನೀಡಿ, ಎ.10ರಂದು ಬೆಳಗ್ಗೆ 9 ಗಂಟೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಆರ್. ಪಾಟೀಲ್ ಉದ್ಘಾಟಿಸಲಿದ್ದು, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಆರೋಗ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಕುಲಪತಿ ಡಾ| ಭಗವಾನ್ ಬಿ.ಸಿ., ಅಲೈಡ್ ಮತ್ತು ಹೆಲ್ತ್ ಕೇರ್ ಪ್ರೊಫೆಷನ್ ನ ರಾಷ್ಟ್ರೀಯ ಆಯೋಗದ ಚೇರ್ ಮೆನ್ ಡಾ| ಯಗ್ನ ಉಮೇಶ್ ಶುಕ್ಲ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ನ ಪ್ರೋ ಚಾನ್ಸಿಲರ್ ಡಾ| ಎಚ್.ಎಸ್. ಬಳ್ಳಾಲ್, ಇಂಡಿಯನ್ ಅಸೋಸಿಯೇಶನ್ ಆಫ್ ಫಿಸಿಯೋಥೆರಫಿಸ್ಟ್ ನ ಅಂತಾರಾಷ್ಟ್ರೀಯ ವ್ಯವಹಾರಗಳ ಚೇರ್ ಮೆನ್ ಡಾ| ಅಲಿ ಇರಾನಿ, ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋಥೆರಪಿಸ್ಟ್ಸ್ ನ ಅಧ್ಯಕ್ಷ ಡಾ| ಸಂಜೀವ್ ಕೆ. ಝಾ, ದಿ ಇಂಡಿಯನ್ ಅಸೋಸಿಯೇಶನ್ ಆಫ್ ಫಿಸಿಯೇಥೆರಪಿಸ್ಟ್ಸ್ ರಾಷ್ಟ್ರೀಯ ಮಹಿಳಾ ವಿಭಾಗದ ಮುಖ್ಯಸ್ಥೆ ಡಾ| ರುಚಿ ವರ್ಸ್ನೇಯಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

26ನೇ ವರ್ಷದ ಕಾರ್ಯಕ್ರಮ ಇದಾಗಿದ್ದು, ಪಿಲಿಪಿನ್ಸ್, ಮಸ್ಕತ್, ದುಬೈ ಸಹಿತ ದೇಶ ವಿದೇಶಗಳ ಸುಮಾರು ಆರು ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಇದರ ಭಾಗವಾಗಿ ವಾರವಿಡಿ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಎ. 6ರಂದು ಬೆಳಗ್ಗೆ 10 ಗಂಟೆಗೆ ನೀರುಮಾರ್ಗದ ಮಂಗಳಾ ಫಿಸಿಯೋಥೆರಪಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಉದ್ಘಾಟಿಸಲಿದ್ದಾರೆ. 100ಕ್ಕೂ ಅಧಿಕ ರಕ್ತದಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಎ. 7ರಂದು ಬೆಳಗ್ಗೆ 10ಕ್ಕೆ ವೆನ್ಲಾಲ್ ಆಸ್ಪತ್ರೆಯಲ್ಲಿ ಹಣ್ಣು ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅದೇ ದಿನ ಬೆಳಗ್ಗೆ 9ಕ್ಕೆ ಮಂಗಳೂರಿನ ಯೇನೆಪೋಯ ವಿವಿಯಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ. ಎ. 8ರಂದು ಬೆಳಗ್ಗೆ 9 ಗಂಟೆಗೆ ಪೂರ್ವ ಸಮ್ಮೇಳನ ಕಾರ್ಯಗಾರ ನಗರದ 5 ಕಡೆಗಳಲ್ಲಿ ಆಯೋಜಿಸಲಾಗಿದೆ ಎಂದರು.

ಫಿಸಿಯೋಕಾನ್ ನ ಖಜಾಂಚಿ ಡಾ| ವಿಜಯ್ ಪಿ., ಸಂಚಾಲಕರಾದ ಡಾ| ಮೊಹಮ್ಮದ್ ಸುಹೈಲ್, ಡಾ| ವೈಶಾಲಿ ಶ್ರೀಜಿತ್, ಜಂಟಿ ಕಾರ್ಯದರ್ಶಿ ಡಾ| ಭರತ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular