Tuesday, March 17, 2026
Flats for sale
Homeಜಿಲ್ಲೆಮಂಗಳೂರು ; ಏ.13 ರಿಂದ ಮೇ 16 ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಾಲ...

ಮಂಗಳೂರು ; ಏ.13 ರಿಂದ ಮೇ 16 ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಕದ್ರಿಯಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಬೇಸಿಗೆ ಶಿಬಿರ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಏಪ್ರಿಲ್ 13 ರಿಂದ ಮೇ 16 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಕದ್ರಿಯಲ್ಲಿ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ.

ಶಿಬಿರದಲ್ಲಿ ಒಟ್ಟು 70 ಮಕ್ಕಳಿಗೆ ವಿನೂತನ ಚಟುವಟಿಕೆಗಳ ಕುರಿತು ತರಬೇತಿ ನೀಡಲಾಗುತ್ತದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿದ್ದು ಇತರ ಮಕ್ಕಳಿಗೆ ರೂ. 500 ಶುಲ್ಕ ನಿಗದಿಪಡಿಸಲಾಗಿದೆ. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಶಿಬಿರವು ನಡೆಯಲಿದೆ.

ಆಸಕ್ತರು ದಿನಾಂಕ ಏಪ್ರಿಲ್ 6 ರೊಳಗಾಗಿ ನಗರದ ಬಿಜೈ ಮೆಸ್ಕಾಂ ಬಳಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯಿಂದ ನಿಗದಿತ ನಮೂನೆಯನ್ನು ಪಡೆದು ಜನ್ಮ ದಿನಾಂಕ ಹಾಗೂ ಶಾಲಾ ದೃಢೀಕರಣದೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಮೊದಲು ಅರ್ಜಿ ಸಲ್ಲಿಸಿದ 70 ಮಕ್ಕಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular