Sunday, July 19, 2026
Homeಜಿಲ್ಲೆಮಂಗಳೂರು : ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳದ ವ್ಯಕ್ತಿಯ...

ಮಂಗಳೂರು : ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳದ ವ್ಯಕ್ತಿಯ ಬಂಧನ .

ಮಂಗಳೂರು : ಜ.17 ರಂದು ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಯುವಕನೊಬ್ಬನು ಬೈಕ್ ನಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಲಂನ ಜೂಡ್ ಮಾಥ್ಯೂ(20) ಎಂದು ತಿಳಿದುಬಂದಿದೆ.

ಆರೋಪಿಯಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಎನ್.ಎಸ್ ಬೈಕ್ ಸಮೇತ ಒಟ್ಟು ಸೇರಿ ರೂ 70,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular