ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ರಾಜ್ಯದಲ್ಲಿ ತೀರ್ವ ಆಂತಕ ಮೂಡಿಸಿತ್ತು. ಇದೀಗ ತನಿಖೆಯನ್ನು ಎನ್‌ಐಎ ತನಿಖೆಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮಂಗಳೂರಿನ ಆಟೋದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪೊಲೀಸರು ಪ್ರಾಥಮಿಕ ತನಿಖೆ ಮಾಡಿದ್ದಾರೆ. ಈ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಆಧರಿಸಿ ರಾಜ್ಯ ಸರ್ಕಾರ ಯುಎಪಿಎ ಕಾಯ್ದೆ ಅನ್ವಯ ಎನ್ಐಎ ತನಿಖೆ ನಡೆಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು.