ಮಂಗಳೂರು : ಸುಬ್ರಹ್ಮಣ್ಯ ಗ್ರಾಮಸ್ಥರು ವಿರೋಧಿಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, MLC ಮಂಜುನಾಥ ಭಂಡಾರಿ ಯವರ ಶಿಫಾರಸಿನ ಮೇಲೆ ಕಾಂಗ್ರೆಸ್ ಮುಖಂಡ ಕಂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿಯವರನ್ನು ಆಯ್ಕೆ ಮಾಡಿದ್ದರು.
ಈ ಮನುಷ್ಯ ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇಗುಲ ಆಡಳಿತ ಮಂಡಳಿಗೆ ವಂಚನೆ ಮಾಡಿರುವ ಆರೋಪ ಇದೆ. ಇದೇ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು.ಅಲ್ಲದೇ ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಾಣೆ ಆರೋಪಿಸಿ ದಾಖಲೆ ಸಮೇತ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸುಬ್ರಹ್ಮಣ್ಯ ಗ್ರಾಮಸ್ಥರು ಪತ್ರ ಬರೆದಿದ್ದರು. ಆದರೆ ಗ್ರಾಮಸ್ಥರ ಮನವಿಗೂ ಕ್ಯಾರೆ ಎನ್ನದೇ ಹರೀಶ್ ಇಂಜಾಡಿ ನೇಮಕ ಮಾಡಲಾಗಿದೆ. ಆಡಳಿತ ಮಂಡಳಿ ಸದ್ಯಸ್ಯರಾಗಲು ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಆಗಬಾರದು ಎನ್ನುವ ನಿಯಮ ಮೀರಿ ಆಯ್ಕೆ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಲಾಗಿದೆ.
ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ರೌಡಿ ಶೀಟರ್ ಎಂದಿದ್ದ ಕಾಂಗ್ರೆಸ್. ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಬಗ್ಗೆ ಆರೋಪಿಗಳನ್ನು ಅಲ್ಲಗಳೆದಿದ್ದ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ‘ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ’ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷನಾಗಿದ್ದೇನೆ, 25 ವರ್ಷಗಳ ಹಿಂದೆ ಅಂಗಡಿ ಗುತ್ತಿಗೆ ಪಡೆದ ವೇಳೆ ದೇವಸ್ಥಾನಕ್ಕೆ ಹಣ ಬಾಕಿ ಇತ್ತು ಆ ಬಳಿಕ ನನ್ನ ಮೇಲೆ ಚೆಕ್ ಬೌನ್ಸ್ ಪ್ರಕರಣ ಕೂಡ ದಾಖಲಾಗಿತ್ತು ಬಳಿಕ ನನ್ನ ತಪ್ಪನ್ನು ಅರಿತು ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಬಾಕಿ ಕ್ಲಿಯರ್ ಮಾಡಿದೆ.ರಾಜಕೀಯ ಷಡ್ಯಂತ್ರದಿಂದ ಆಗ ನನ್ನ ಮೇಲೆ ಸುಳ್ಯ ಇನ್ಸ್ಪೆಕ್ಟರ್ ರೌಡಿಶೀಟರ್ ಓಪನ್ ಮಾಡಿದರು,ಆದರೆ 15 ವರ್ಷಗಳ ಹಿಂದೆ ನನ್ನ ಸನ್ನಡತೆ ಗಮನಿಸಿ ರೌಡಿ ಶೀಟ್ ರದ್ದು ಮಾಡಲಾಗಿದೆ ಆ ಬಳಿಕ ನಾನು ಸುಬ್ರಹ್ಮಣ್ಯದಲ್ಲಿ ಗೌರವಯುತ ಬದುಕು ಬದುಕ್ತಾ ಇದೀನಿ, ಇದನ್ನ ಗಮನಿಸಿ ನನ್ನ ರಾಜಕೀಯ ಮತ್ತು ವ್ಯವಹಾರಿಕ ವಿರೋಧಿಗಳು ಷಡ್ಯಂತ್ರ ಮಾಡಿದ್ದಾರೆ ನಾನು ಅಧ್ಯಕ್ಷನಾದ್ರೆ ಬಿಜೆಪಿ ಅವಧಿಯಲ್ಲಿ ದೇವಸ್ಥಾನದಲ್ಲಿ ಆದ ಅವ್ಯವಹಾರ ಹೊರಗೆ ಹಾಕ್ತೇನೆ ಅಂತ ಭಯದಲ್ಲಿ ಇದ್ದಾರೆ,2-3 ಕೋಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಡಿಗೆ ಬಾಕಿ ಇರಿಸಲಾಗಿದೆ ಬಿಜೆಪಿ ಅವಧಿಯಲ್ಲಿ ಸಾಕಷ್ಟು ಅವ್ಯವಹಾರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ


