ಮಂಗಳೂರು : ಚಿಕ್ಕಮಗಳೂರಿನಲ್ಲಿ ಹಿಂದೂ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಚಿಕ್ಕಮಗಳೂರು ಘಟನೆ ಸಂಬಂಧ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ,ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತಾರೆ,ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ,ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದರು.
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಅವರು ಯಾಕೆ ಹೋಗ್ತಿದ್ದಾರೆ ಅಂತಾ ಗೊತ್ತಿಲ್ಲ.ಅವರ ಹಣದಲ್ಲಿ ಅವರು ಎಲ್ಲಿ ಬೇಕಾದರೂ ಹೋಗಬಹುದು.ಆಸ್ಟ್ರೇಲಿಯಾ ಸೇರಿದಂತೆ ಎಲ್ಲಾ ಕಡೆ ಕೃಷಿ ಇದೆ.ಬಜೆಟ್ ನಲ್ಲಿ ಅವರಿಗೆ ಕೆಲಸ ಇಲ್ಲ.ಬಜೆಟ್ ತಯಾರು ಮಾಡೋದು ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆಯವರು,ಸಿಎಲ್ ಪಿ ಸಭೆಯಲ್ಲಿ ಬಜೆಟ್ ಕುರಿತು ಅವರ ಅನಿಸಿಕೆಗಳನ್ನು ಹೇಳಿದ್ದಾರೆ. ಇದೆಲ್ಲವನ್ನೂ ಕ್ರೋಡೀಕರಿಸಿ ಬಜೆಟ್ ತಯಾರು ಮಾಡುತ್ತಾರೆ.ಶಾಸಕರು ಎಲ್ಲಿ ಬೇಕಾದರೆ ಹೋಗ್ತಾರೆ ಬರ್ತಾರೆ. ನಮ್ಮಲ್ಲಿ ಯಾವ ಕದನವೂ ಇಲ್ಲ ಎಂದರು.
ಪ್ರಿಯಾಂಕ ಖರ್ಗೆ ಆರ್ ಎಸ್ ಎಸ್ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಪ್ರಿಯಾಂಕ ಖರ್ಗೆ ಅವರ ಅಭಿಪ್ರಾಯ ಹೇಳಿದ್ದಾರೆ,ಅರ್ ಎಸ್ ಎಸ್ ಕುರಿತು ನನಗೆ ನನ್ನೆದೇ ಅಭಿಪ್ರಾಯ ವಿದೆ ಪ್ರಿಯಾಂಕ ಖರ್ಗೆ ಅವರಿಗೆ ಅರ್ ಎಸ್ ಎಸ್ ಬಗ್ಗೆ ಅವರದೇ ಆದ ಅಭಿಪ್ರಾಯವನ್ನು ಹೇಳಿದ್ದಾರೆ ಅವರ ಅಭಿಪ್ರಾಯಕ್ಕೆ ನನ್ನ ಹೇಳಿಕೆ ಅಗತ್ಯವಿಲ್ಲ ಎಂದರು.
ಎಚ್.ಸಿ ಮಹದೇವಪ್ಪ ದಲಿತ ಸಿ.ಎಂ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು ಸಚಿವ ಎಚ್.ಸಿ ಮಹದೇವಪ್ಪ ಅವರ ಅಭಿಪ್ರಾಯ ಹೇಳಿದ್ದಾರೆ.
ಮಹದೇವಪ್ಪವರು ಸಮರ್ಥರಿದ್ದಾರೆ. ಯಾವುದೇ ಜವಬ್ದಾರಿ ಕೊಟ್ಟರು ತೆಗೆದುಕೊಳ್ಳುವುದಕ್ಕೆ ಅವರಿಗೆ ಸಾಮರ್ಥ್ಯ ಇದೆ.ಅದಕ್ಕೆ ಅವರು ಹೇಳಿದ್ದಾರೆ.
ಜನಸಮುದಾಯದಲ್ಲಿ ಕೆಲವರು ಅವರವರ ಲೀಡರ್ ಅಂತಾ ಆರಿಸಿಕೊಳ್ಳುತ್ತಾರೆ.ಜನ ಅವರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಅದನ್ನು ತಪ್ಪು ಅಂತಾ ನಾವು ಹೇಳುವುದಕ್ಕೆ ಆಗಲ್ಲ.ಅವರ ಅಭಿಪ್ರಾಯ ಅದು.ನಮ್ಮಲ್ಲಿ ಒಂದು ವ್ಯವಸ್ಥೆ ಇದೆ, ಹೈಕಮಾಂಡ್ ಇದೆ, ಸಂದರ್ಭ ಇದೆ. ಹೈಕಮಾಂಡ್ ಆ ಬಗ್ಗೆ ತೀರ್ಮಾನ ಮಾಡ್ತಾರೆ.ಯಾರೋ ಹತ್ತು ಜನ ನನ್ನ ಪರವಾಗಿ ಜೈಕಾರ ಹಾಕಿದ್ರೆ ಆಗಲ್ಲ. ಆದ್ರೆ ಹೈಕಮಾಂಡ್ ನವರು ಅದನ್ನೆಲ್ಲಾ ನೋಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಈಗ ಆ ಸಂದರ್ಭ ಇದೆ ಅಂತಾ ನನಗೆ ಅನಿಸಲ್ಲ ಈಗ ದಲಿತ ಸಿ.ಎಂ ಎಂಬ ಚರ್ಚೆಯೆ ಇಲ್ಲನಾವು ಆಡಳಿತದ ಮೇಲೆ ನಿಗಾ ಇರಿಸಿದ್ದೇವೆ ಎಂದು ಹೇಳಿದರು.
ಮಂಗಳೂರು ಜಿಲ್ಲಾ ಕಾರಾಗೃಹ ಸ್ಥಳಾಂತರಕ್ಕೆ ಮತ್ತೂ120 ಕೋಟಿ ರೂಪಾಯಿ ಬೇಕು ಈ ಬಗ್ಗೆ ಸಿಎಂ ಬಳಿ ಮಾತನಾಡಿದ್ದೇನೆ ಈಗಾಗಲೇ ಮುಡಿಪು ಬಳಿ ಜಿಲ್ಲಾ ಕಾರಾಗೃಹ ನಿರ್ಮಾಣವಾಗುತ್ತಿದೆ ,50 ಕೋಟಿ ರೂಪಾಯಿ ಬಿಡುಗಡೆಯಾದರೆ ಕಾರಾಗೃಹ ದ ಸುತ್ತ ಕಾಂಪೌಂಡ್ ಕಟ್ಟುತ್ತೇವೆ ಮಂಗಳೂರು ನಗರದಿಂದ ಕಾರಾಗೃಹ ಶಿಷ್ಟ್ ಆದರೆ ಸ್ವಲ್ಪ ವಾತಾವರಣ ಸುಧಾರಿಸಲಿದೆ, ಮಂಗಳೂರು ಕಾರಾಗೃಹ ದಲ್ಲಿ ಜಾಮರ್ಸ್ ಗಳನ್ನ ಕೈದಿಗಳೇ ಕಿತ್ತುಹಾಕುತ್ತಾರೆ,ಕಾರಾಗೃಹ ದಲ್ಲಿ ಗಲಾಟೆ , ಹಲ್ಲೆ ಘಟನೆ ನಡೆಯುತ್ತಿದೆ ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಕಾರಾಗೃಹ ಶೀಷ್ಟ್ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.


