Tuesday, August 25, 2026
Homeಜಿಲ್ಲೆಮಂಗಳೂರು : ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ನಟ ಯಶ್.

ಮಂಗಳೂರು : ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ನಟ ಯಶ್.

ಮಂಗಳೂರು : ನಟ ಯಶ್ ಅವರು ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್ ಅವರಿಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ದೊರೆಯಿತು.

ನಾಳೆ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಯಶ್ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಚಿತ್ರ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವುದು ಯಶ್ ಅವರ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ಪ್ರತಿಯೊಂದು ಚಿತ್ರದ ಬಿಡುಗಡೆ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಯಶ್ ಮುಂದುವರಿಸಿಕೊಂಡು ಬಂದಿದ್ದಾರೆ.

ಇದೀಗ ‘ಟಾಕ್ಸಿಕ್’ ಚಿತ್ರದ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಯಶ್, ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular