ಮಂಗಳೂರು : ನಮ್ಮ ಶತ್ರು ಗಳಿಗಿಂತ ನಮ್ಮ ದೇಶದಲ್ಲಿರುವ ಉಗ್ರರನ್ನು ಹುಡುಕಿ ಹೊಡೆದುರುಳಿಸಿದರೆ ದೇಶದಲ್ಲಿ ಭಯೋತ್ಪಾದನೆಯನ್ನು ಬೇಗನೆ ನಿರ್ಮೂಲನೆ ಮಾಡಬಹುದೆಂಬುದು ಕೆಲವು ತಜ್ಞರ ಮಾತು.
ಜಮ್ಮು-ಕಾಶ್ಮೀರದ ಪಹಲ್ಗಾವ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದ್ದರು.ಈ ದಾಳಿಯಲ್ಲಿ ಕರ್ನಾಟಕದ ಇಬ್ಬರು ಪ್ರವಾಸಿಗರು ಸೇರಿದಂತೆ 27 ಮಂದಿ ಮೃತಪಟ್ಟಿದ್ದರು ಈ ಘಟನೆಯನ್ನು ಸಮರ್ಥಿಸಿ ಮಂಗಳೂರಿನ ಉಗ್ರನೊಬ್ಬ ಫೇಸ್ಬುಕ್ ಪೇಜ್ವೊಂದರಲ್ಲಿ ಪೋಸ್ಟ್ ಹಾಕಿದ್ದು ಇದಕ್ಕೆ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಬೇನಾಮಿ ಫೋಟೋ ಹಾಕಿ ನಿಚ್ಚು ಮಂಗಳೂರು ಎಂಬ ಫೇಸ್ಬುಕ್ ಪೇಜ್ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ಬುಕ್ ಪೇಜ್ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 192 ಮತ್ತು 353(1)(,b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ ಪೇಜ್ನ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.ಒಟ್ಟಿನಲ್ಲಿ ನಮ್ಮ ದೇಶದಲ್ಲಿ ಹುಟ್ಟಿ ಶತ್ರು ದೇಶ ಪಾಕಿಸ್ತಾನಕ್ಕೆ ಬೆಂಬಲ ಕೊಡುವುದು ವಿಪರ್ಯಾಸವಾಗಿದೆ.


