Tuesday, July 7, 2026
Homeಜಿಲ್ಲೆಮಂಗಳೂರು : ಜಲ್ಲಿಗುಡ್ಡೆ ಎಕ್ಸ್ಪೋ ಕ್ಲಬ್‌ನಿಂದ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ.

ಮಂಗಳೂರು : ಜಲ್ಲಿಗುಡ್ಡೆ ಎಕ್ಸ್ಪೋ ಕ್ಲಬ್‌ನಿಂದ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ.

ಮಂಗಳೂರು : ಜಲ್ಲಿಗುಡ್ಡೆ ಎಕ್ಸ್ಪೋ ಕ್ಲಬ್ (ರಿ) ಹಾಗೂ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ವಿವಿಧ ಸರ್ಕಾರಿ ಸವಲತ್ತುಗಳಿಗಾಗಿ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಮಿಕ ಇಲಾಖೆಯ ಉಪ ವಿಭಾಗ–1ರ ಅಧಿಕಾರಿ ಕುಮಾರ್ ಬಿ.ಆರ್. ಅವರು, ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ವಿವಿಧ ಕಲ್ಯಾಣ ಯೋಜನೆಗಳು, ಸವಲತ್ತುಗಳು ಹಾಗೂ ಅವುಗಳನ್ನು ಪಡೆಯುವ ವಿಧಾನಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ’ಸೋಜಾ ಅವರು ಜಲ್ಲಿಗುಡ್ಡೆ ಎಕ್ಸ್ಪೋ ಕ್ಲಬ್‌ನ ಸಾಮಾಜಿಕ ಸೇವಾ ಕಾರ್ಯಗಳನ್ನು ಶ್ಲಾಘಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ, ಲಯನ್ ಬಿ. ಪ್ರಕಾಶ್ ಪೈ, ಅಂಬಾ ಭವಾನಿ ಭಜನಾ ಮಂದಿರದ ಅಧ್ಯಕ್ಷ ಬಾಲಚಂದ್ರ ರಾವ್ ಸಿಂಧ್ಯಾ, ಗೌರವಾಧ್ಯಕ್ಷ ಇಝಾ ಬಜಾಲ್ ಹಾಗೂ ಕ್ಲಬ್ ಅಧ್ಯಕ್ಷ ಜ್ಯೋತಿಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಲೋಕೇಶ್ ಪಿ. ಅತಿಥಿಗಳನ್ನು ಸ್ವಾಗತಿಸಿದರು. ಸುಧಾಕರ್ ಪಾಟೀಲ್ ಕಾರ್ಯಕ್ರಮ ನಿರೂಪಣೆ ನಡೆಸಿದರೆ, ಪ್ರೀತೇಶ್ ವಂದನಾರ್ಪಣೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular