Saturday, December 13, 2025
Flats for sale
Homeಕ್ರೈಂಮಂಗಳೂರು ; ಡಿಜಿಟಲ್ ಅರೆಸ್ಟ್ ಗೆ ಒಳಗಾದ ವೃದ್ಧ ದಂಪತಿ..!ಬ್ಯಾಂಕ್ ಮ್ಯಾನೆಜರ್,ಪೋಲಿಸರ ಸಮಯ ಪ್ರಜ್ಞೆಗೆ 84...

ಮಂಗಳೂರು ; ಡಿಜಿಟಲ್ ಅರೆಸ್ಟ್ ಗೆ ಒಳಗಾದ ವೃದ್ಧ ದಂಪತಿ..!ಬ್ಯಾಂಕ್ ಮ್ಯಾನೆಜರ್,ಪೋಲಿಸರ ಸಮಯ ಪ್ರಜ್ಞೆಗೆ 84 ಲಕ್ಷ ಸೇಫ್..!

ಮಂಗಳೂರು ; ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಮಸಕಟ್ಟೆ ನಿವಾಸಿಗಳಾದ ಹಿರಿಯ ನಾಗರೀಕರನ್ನು ಮುಲ್ಕಿ ಪೊಲೀಸರು ಹಾಗೂ ಕಿನ್ನಿಗೋಳಿ ಕೆನರಾ ಬ್ಯಾಂಕ ಮ್ಯಾನೇಜರ ವರು ಡಿಜಿಟಲ್ ಅರೆಸ್ಟ್ನಿಂದ ತಪ್ಪಿಸಿದ ಘಟನೆ ನಡೆದಿದೆ.

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಮಸಕಟ್ಟೆ ನಿವಾಸಿಗಳಾದ ಬೆನ್ಡ್ಡಿಕ್ ಪೆರ್ನಾಂಡಿಸ್ (84 ವರ್ಷ) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71 ವರ್ಷ ) ರವರು ಡಿ 01 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್ ಫೋನ್ ವಾಟ್ಸ್ ಅಪ್ ಮೂಲಕ ಸಂಪರ್ಕಿಸಿದ್ದು ನೀವು 6 ಕೋಟಿ ಮೋಸ ಮಾಡಿದಾಗಿ ನಿಮ್ಮ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್ಗೆ ಒಳಪಡಿಸಿ, ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದಾರೆ. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ರವರು ದೊಡ್ಡ ಮೊತ್ತದ ಹಣವನ್ನು ಯಾಕೆ ವರ್ಗಾವಣೆ ಮಾಡುತ್ತಿದ್ದಿರಿ ಎಂದು ಈ ಬಗ್ಗೆ ದಂಪತಿಗಳ ಬಳಿ ವಿಚಾರಿಸಿದಾಗ ವೃದ್ದದಂಪತಿಗಳು ಸರಿಯಾದ ಉತ್ತರ ನೀಡಿದ್ದಾರೆ.ಈ ಬಗ್ಗೆ ಸಂಶಯಗೊಂಡು, ಸೈಬರ್ ವಂಚಕರು ಒದಗಿಸಿದಂತಹ ಖಾತೆಗೆ ಹಣವನ್ನು ವರ್ಗಾವಣೆ ಮಾಡದೇ 84 ಲಕ್ಷ ರೂ ಬ್ಯಾಂಕ್ ಮ್ಯಾನೇಜರ ರವರು ಸೇಫ್ ಮಾಡಿದ್ದಾರೆ‌.

ಈ ಬಗ್ಗೆ ಬ್ಯಾಂಕ್ ಮ್ಯಾನೆಜರ್ ರವರು ಕಿನ್ನಿಗೋಳಿ ಪರಿಸರದ ಬೀಟ್ ಸಿಬ್ಬಂದಿಯವರಾದ ಹೆಚ್ ಸಿ 683 ಯಶವಂತ ಕುಮಾರ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಹೆಚ್ ಸಿ 802 ಕಿಶೋರ ರವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಮುಲ್ಕಿ ಪೊಲೀಸರು ವೃದ್ದ ದಂಪತಿಗಳ ಮನೆಗೆ ತೆರಳಿ ಅವರ ಮೊಬೈಲ್ನ್ನು ಪರಿಶೀಲಿಸಿದ್ದು ಈ ಸಮಯ ಅವರು ಡಿಜಿಟಲ್ ಅರೆಸ್ಟ್ಗೆ ಒಳಗಾಗಿರುವುದು ಕಂಡುಬಂದಿದೆ. ಕೂಡಲೇ ಪೊಲೀಸ್ ಸಿಬ್ಬಂದಿಗಳು ಬ್ಯಾಂಕ್ ಮ್ಯಾನೇಜರ ರವರಿಗೆ ಕರೆ ಮಾಡಿ ವಿಚಾರ ತಿಳಿಸಿ ಹಣ ವರ್ಗಾವಣೆ ಮಾಡದಂತೆ ಸೂಚಿಸಿದ್ದಾರೆ,ಬಳಿಕ ವೃದ್ದ ದಂಪತಿಗಳಿಗೆ ತಿಳುವಳಿಕೆ ನೀಡಿ, ವೃದ್ದ ದಂಪತಿಗಳ ಹಣವನ್ನು ಉಳಿಸಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯವರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular