ಮಂಗಳೂರು : ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳಗಿನ ಜಾವ ನಡೆದ ರೌಡಿಶೀಟರ್ ಆರಿಫ್ ಅಲಿಯಾಸ್ ‘ಟ್ಯಾಬ್ಲೆಟ್ ಆರಿಫ್’ ಕೊಲೆ ಪ್ರಕರಣದಲ್ಲಿ ಅಪರಾಧಕ್ಕೆ ಬಳಸಲಾದ ಕಾರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಹಲ್ಲೆಕೋರರು ಬಳಸಿದ್ದಾರೆ ಎನ್ನಲಾದ ವಾಹನವು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಲಿಯಲ್ಲಿ ಬಿಟ್ಟು ಹೋಗಿದ್ದು, ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ.
ಆರಿಫ್ ಗೆ ಬೈಕ್ ಗೆ ಗುದ್ದಿ ಬಳಿಕ ಕೆಳಗಡೆ ಬಿದ್ದ ಸಂದರ್ಭದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆರೋಪಿಗಳು ಅದೇ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ನಂತರ ಜಾಗೃತರಾಗಿದ್ದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಟೊಪ್ಪಿ ನೌಶಾದ್ ಕೊಲೆಗೆ ಆರಿಫ್ ಕೊಲೆ ರಿವೇಂಜ್ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ. ಈ ಮಧ್ಯೆ, ಬಂಟ್ವಾಳದ ಬುಡೋಲಿಯಲ್ಲಿ ಅನುಮಾನಾಸ್ಪದ ಕಾರಿನ ಬಗ್ಗೆ ಮಾಹಿತಿ ಬಂದಿದ್ದು, ವಿಟ್ಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ವಾಹನವನ್ನು ವಶಪಡಿಸಿಕೊಂಡಿದೆ.


