ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಲ್ಲಿಸುರಿದ ನಿರಂತರ ಭಾರೀ ಗಾಳಿ ಮಳೆಗೆ ಪಂಪ್ವೆಲ್ ರಾಜಕಾಲುವೆಯಲ್ಲಿ ನೀರು ತುಂಬಿ ರಸ್ತೆ ಹರಿದಿದೆ .ಎರಡು ಗಂಟೆಯಿಂದ ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಪಂಪ್ವೆಲ್ ಫ್ಲೈ ಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದೆ.


ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಹಳೆ ಕಟ್ಟಡದ ಗೋಡೆ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯ ಮೇಲೆ ಗೋಡೆ ಕುಸಿದು ಬಿದ್ದಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಇತ್ತೀಚೆಗೆ ಈ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು ಆದರೆ ಗೋಡೆಯ ಒಂದು ಪಾರ್ಶ್ವವನ್ನು ಹಾಗೇ ಬಿಡಲಾಗಿತ್ತು ಇಂದು ಸುರಿದ ಭಾರೀ ಮಳೆಗೆ ಗೋಡೆ ಕುಸಿದಿದೆ ಎಂದು ಮಾಹಿತಿ ತಿಳಿದಿದೆ.
ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದ್ದು ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕಾಯರ್ತೋಡಿ ಎಂಬಲ್ಲಿ ಅಡಕೆ ತೋಟಕ್ಕೆ ನದಿ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ.ಒಟ್ಟಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುವ ಮಳೆಯಿಂದಾಗಿ ಯಾವೆಲ್ಲ ಪ್ರದೇಶಗಳಲ್ಲಿ ಹಾನಿಗೊಳಗಾಗಿದೆ ಎಂದು ಮುಂದೆ ಕಾದುನೋಡಬೇಕಾಗಿದೆ.


