Tuesday, November 3, 2026
Homeಜಿಲ್ಲೆಮಂಗಳೂರು : ನಗರದಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಮಹಿಳೆ ಬಂಧನ; ₹15.30 ಲಕ್ಷ ಮೌಲ್ಯದ MDMA...

ಮಂಗಳೂರು : ನಗರದಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಮಹಿಳೆ ಬಂಧನ; ₹15.30 ಲಕ್ಷ ಮೌಲ್ಯದ MDMA ವಶ..!

ಮಂಗಳೂರು : ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ಮನೆ ನಿವಾಸಿ ನಸೀಮಾ @ ನಸೀಮ (42) ಎಂದು ಗುರುತಿಸಲಾಗಿದೆ.

ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ, ಪ್ರಕರಣದ ಆರೋಪಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಸೀಮಾ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತು ಪೂರೈಕೆ ಜಾಲದ ಕುರಿತು ತನಿಖೆ ಕೈಗೊಂಡ ಪೊಲೀಸರು, ಆರೋಪಿತೆ ವಾಸವಿದ್ದ ಪಂಪ್‌ವೆಲ್ ಉಜ್ಜೋಡಿಯ ಸಮೀಪದ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ ನಂ.103ಕ್ಕೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಸುಮಾರು ₹15.30 ಲಕ್ಷ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿಚಾರಣೆ ವೇಳೆ ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದುದಾಗಿ ತಿಳಿದುಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಕರಣದಲ್ಲಿ ಆರೋಪಿ ಹಾಗೂ ಮಾದಕ ವಸ್ತು ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಮಾದಕ ವಸ್ತು ಪೂರೈಕೆ ಜಾಲದ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸ್ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular