Monday, August 3, 2026
Homeಜಿಲ್ಲೆಮಂಗಳೂರು : ಬಂಟ್ವಾಳದ ರಾಯಿ ಬಳಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ ;...

ಮಂಗಳೂರು : ಬಂಟ್ವಾಳದ ರಾಯಿ ಬಳಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ ; ಅಂತ್ಯಗೊಂಡ NDRF ಶೋಧ ಕಾರ್ಯಾಚರಣೆ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ಜೀವನ್ ಪಿಂಟೋ (48) ಅವರ ಮೃತದೇಹ ಸೋಮವಾರ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ.

ಘಟನೆಯ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಎರಡು ದಿನಗಳಿಂದ ನಿರಂತರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೂ ಸಂಗಬೆಟ್ಟು ಬಳಿ ಮೃತದೇಹ ಪತ್ತೆಯಾಗಿದ್ದು, ಬಳಿಕ ಅಧಿಕಾರಿಗಳು ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಕ್ರಮ ಕೈಗೊಂಡರು.

ಮೃತದೇಹ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular