ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಲೈಂಗಿಕ ಕಿರುಕುಳ,ಹತ್ಯೆ ಅತ್ಯಾಚಾರದಂತಹ ಅನೇಕ ಪ್ರಕರಣ ಹೆಚ್ಚುತ್ತಿದ್ದು ಜನಸಾಮಾನ್ಯರು ಭಯಭೀತರಾಗಿದ್ದಾರೆ.ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೇಳಿಬಂದಿದೆ. ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್ ಎಂಬಾತನನ್ನು ಉಪ್ಪಿನಂಗಡಿ ಪೋಲೀಸರು ಬಂಧಿಸಿದ್ದಾರೆ.
ಆರೋಪಿ ಅಝೀಮ್ ಯುವತಿ ಬಸ್ನಲ್ಲಿದ್ದಾಗ ಕಿರುಕುಳ ನೀಡಿದ್ದು . ಇದೇ ವೇಳೆ, ಯುವತಿ ಪ್ರತಿಭಟಿಸಿದಾಗ ಆತ ಬಸ್ನ ಕಿಟಕಿಯಿಂದ ಹಾರಿ ತಪ್ಪಿಸಿದ್ದಾನೆಂದು ತಿಳಿದುಬಂದಿದೆ ಬಳಿಕ ಉಪ್ಪಿನಂಗಡಿ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬಸ್ನಲ್ಲಿ ಕಿರುಕುಳ ನೀಡಿದ ಯುವತಿಯನ್ನು ಭೇಟಿಮಾಡಿದ್ದು ಕಾಂಗ್ರೆಸ್ ಆಡಳಿತದಲ್ಲಿ ಸಾಮಾನ್ಯ ಮುಸ್ಲಿಮರೂ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಲ್ಲಡ್ಕ ಪ್ರಭಾಕರ ಭಟ್, ಸಂತ್ರಸ್ತೆ ಯುವತಿಯನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು ಸಾಮಾನ್ಯ ಮುಸ್ಲಿಮರಂತೆ ಕಾಣುವವರು ಕೂಡ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ಕನ್ನಡದ ಜನತೆ ಇಂಥ ಘಟನೆಗಳನ್ನು ಸಹಿಸುವುದಿಲ್ಲ. ಸರ್ಕಾರ, ಪೋಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದೇ ಹೋದಲ್ಲಿ ಜಿಲ್ಲೆಯಲ್ಲಿ ಅರಾಜಕತೆ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ ರಾಜ್ಯ ಸರ್ಕಾರದ ವಿರುದ್ಧ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ.


