Friday, November 22, 2024
Flats for sale
Homeಜಿಲ್ಲೆಮಂಗಳೂರು : ಬಿಲ್ಲವ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ : ಅರಣ್ಯಾಧಿಕಾರಿ ವಿರುದ್ಧ ಕೇಸ್ ಎಫ್​ಐಆರ್...

ಮಂಗಳೂರು : ಬಿಲ್ಲವ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ : ಅರಣ್ಯಾಧಿಕಾರಿ ವಿರುದ್ಧ ಕೇಸ್ ಎಫ್​ಐಆರ್ ದಾಖಲು .

ಮಂಗಳೂರು : ಬಿಲ್ಲವ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಪವಲಯ ಅರಣ್ಯಾಧಿಕಾರಿಯೊಬ್ಬರ ವಿರುದ್ಧ ಬೆಳ್ಳಾರೆ ಪೊಲೀಸರಿಗೆ ದೂರು ನೀಡಲಾಗಿದೆ. ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ದೂರು ನೀಡಿದರೂ ಪ್ರಕರಣ ದಾಖಲಿಸಿರಲಿಲ್ಲ. ಹೀಗಾಗಿ ಹಿಂದೂ ಜಾಗರಣ ವೇದಿಕೆ ನಾಳೆ ಪ್ರತಿಭಟನೆಗೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಬಿಸಿ ಬೆನ್ನಲ್ಲೇ ಇದೀಗ ಎಫ್​ಐಆರ್ ದಾಖಲಿಸಲಾಗಿದೆ.

ಹಿಂದೂ ಜಾಗರಣ ವೇದಿಕೆ ಇಂತಹ ಕೂಡಲೇ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ಸಿದ್ಧತೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಪಂಜ ಉಪವಲಯದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಮಕ್ಕಳ ಬಗ್ಗೆ ನಾಲಗೆ ಹರಿಬಿಟ್ಟಿದ್ದರು. ಸುರೇಶ್ ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಸರ್ಕಾರಿ ಅಧಿಕಾರಿಯ ಆಡಿಯೋ ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿತ್ತು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂ…. ಆಗಿದ್ದಾರೆ’‌ ‘ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ’ ‘ಹಿಂದುತ್ವದ ಹುಡುಗರು ಸೂ…ನ್ನಾಗಿ ಮಾಡಿದ್ದಾರೆ’ ‘ಬಿಲ್ಲವ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ’ ‘ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದ್ದರು’ ಎಂದು ಫೋನ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular