Wednesday, November 5, 2025
Flats for sale
Homeಜಿಲ್ಲೆಮಂಗಳೂರು : ಬಿಸಿಲಿನ ತಾಪ,ನೀರಿನ ಗುಣಮಟ್ಟದಲ್ಲಿ ಬದಲಾವಣೆಯಿಂದ ಕರಾವಳಿ ಭಾಗದಲ್ಲಿ ಹೆಚ್ಚಿದ ಫುಡ್ ಪಾಯಿಸನ್ ಪ್ರಕರಣ.

ಮಂಗಳೂರು : ಬಿಸಿಲಿನ ತಾಪ,ನೀರಿನ ಗುಣಮಟ್ಟದಲ್ಲಿ ಬದಲಾವಣೆಯಿಂದ ಕರಾವಳಿ ಭಾಗದಲ್ಲಿ ಹೆಚ್ಚಿದ ಫುಡ್ ಪಾಯಿಸನ್ ಪ್ರಕರಣ.

ಮಂಗಳೂರು : ಹವಾಮಾನ ವೈಪರೀತ್ಯದಿಂದ ಪರಿಸರದಲ್ಲಿ ಬದಲಾವಣೆ ಯಾಗುವುದು ಸಹಜ ಇದೀಗ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಯಿಂದ ಫುಡ್ ಪಾಯಿಸನ್ ಪ್ರಕರಣ ಹೆಚ್ಚಾಗುತ್ತಿದೆ ಎಂದು ವರದಿಯಾಗಿದೆ.

ಇತ್ತೀಚಿಗೆ ಮಂಗಳೂರಿನ ಮತ್ತು ಕರಾವಳಿ ಭಾಗದ ಇತರ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್​ ಪಾಯಿಸನ್​ನ ಹಲವು ಪ್ರಕರಣಗಳು ದೃಢಪಡುತ್ತಿವೆ. ದಿನಕ್ಕೆ ಐದಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ವೈದ್ಯರಿಂದ ಮಾಹಿತಿ ದೊರೆತಿದ್ದು ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100 ಮಂದಿ ಫುಡ್​ ಪಾಯಿಸನ್ ಅಥವಾ ವಿಷಾಹಾರ ಸಮಸ್ಯೆಯಿಂದ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆಂದು ತಿಳಿದಿದೆ.ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆಹಾರದಲ್ಲಿರುವ ಕಲ್ಮಶ,ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳು ದಿನನಿತ್ಯ ಸೇವಿಸುವ ಆಹಾರ ವಿಷವಾಗಿ ಪರಿಣಮಿಸುತ್ತಿದ್ದುಹಾಗೂ ಕಲುಷಿತ ನೀರು ಸೇವನೆಯೇ ಮುಖ್ಯ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಬೀದಿಬದಿ ಆಹಾರ,ಸ್ಟೋರೇಜ್ ಮಾಡಿದ ತಿನಿಸುಗಳು,ಅವಧಿ ಮೀರಿದ ಅಥವಾ ಬೇಯಿಸದ ಆಹಾರದ ಬಳಕೆ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ದೀರ್ಘಾವಧಿಯ ಆಹಾರ ಸಂಗ್ರಹಣೆ, ಹಾಳಾದ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಮತ್ತು ಹೆಚ್ಚು ಸಂಸ್ಕರಿಸಿದ ಆಹಾರಗಳ ಸೇವನೆಯೂ ವಿಷಾಹಾರಕ್ಕೆ ಕಾರಣವಾಗತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.

ದಿನನಿತ್ಯ ಮನೆ ಊಟ,ಬಿಸಿಯಾದ ನೀರು ,ಲವಂಗದಲ್ಲಿ ಬೇಯಿಸಿದ ನೀರು ,ಜೀರಿಗೆಯಲ್ಲಿ ಬೇಯಿಸಿದ ನೀರು ಹಾಗೂ ನಾಟಿ ಮದ್ದು ಸೇವನೆ ಮಾಡುವುದರಿಂದ ಜೇನುತುಪ್ಪವು ಆ್ಯಂಟಿಫಂಗಲ್ ಏಜೆಂಟ್ಆಗಿರುವುದರಿಂದ ವಿಷಾಹಾರದ ತೀವ್ರತೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular