Friday, February 20, 2026
Flats for sale
Homeಜಿಲ್ಲೆಮಂಗಳೂರು ; ಭವಾನಿ ಬಸ್ ನಿರ್ವಾಹಕರ ಮೇಲೆ ಕಾಲೇಜು ವಿಧ್ಯಾರ್ಥಿಗಳಿಂದ ಹಲ್ಲೆ,ರಾಣಿ ಅಬ್ಬಕ್ಕ ಖಾಸಗಿ ಬಸ್...

ಮಂಗಳೂರು ; ಭವಾನಿ ಬಸ್ ನಿರ್ವಾಹಕರ ಮೇಲೆ ಕಾಲೇಜು ವಿಧ್ಯಾರ್ಥಿಗಳಿಂದ ಹಲ್ಲೆ,ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ಖಂಡನೆ.

ಮಂಗಳೂರು ; 19/02/2026 ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯ ಮಂಚಿ–ಮುಡಿಪು ಕಡೆ ಸಂಚರಿಸುತ್ತಿದ್ದ ಭವಾನಿ ಬಸ್‌ನ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ವಿಷಾದನೀಯವಾಗಿದೆ ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ಅಕ್ರೋಶ ಹೊರಹಾಕಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿರುವ ಸಾರ್ವಜನಿಕ ಸಾರಿಗೆ ನೌಕರರ ಮೇಲೆ ಹಲ್ಲೆ ನಡೆಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇದು ಸಮಾಜದ ಶಾಂತಿ ಮತ್ತು ಶಿಸ್ತಿಗೆ ಧಕ್ಕೆಯಾಗಿದೆ.ಬಈ ಘಟನೆಯನ್ನು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ. ಸಂಬಂಧಿಸಿದ ಪೊಲೀಸ್ ಇಲಾಖೆ ತಕ್ಷಣ ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆಹಚ್ಚಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವಂತೆ ನಾವು ವಿನಂತಿಸುತ್ತೇವೆ..
ಖಾಸಗಿ ಬಸ್ ನೌಕರರ ಸುರಕ್ಷತೆ ಹಾಗೂ ಗೌರವವನ್ನು ಕಾಪಾಡುವುದು ಆಡಳಿತದ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಅಗತ್ಯ ಕಾನೂನು ಹಾಗೂ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular