Saturday, March 14, 2026
Flats for sale
Homeಜಿಲ್ಲೆಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಭಾರಿ ಮಳೆ : ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಭಾರಿ ಮಳೆ : ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 15-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 15-07-2024 ರಂದು ರಜೆಯನ್ನು ಘೋಷಿಸಲಾಗಿದೆ.

ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
ನೀರು ಇರುವ ತಗ್ಗು ಪ್ರದೇಶ, ಕರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀವ ಹೋಗದಂತೆ ಎಚ್ಚರಿಕೆ ವಹಿಸುವುದು.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ನಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು..

RELATED ARTICLES

LEAVE A REPLY

Please enter your comment!
Please enter your name here

Most Popular