Friday, March 13, 2026
Flats for sale
Homeಜಿಲ್ಲೆಮಂಗಳೂರು ; ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ; ನಾಪತ್ತೆಯಾದ ಯುವತಿ ನಟೋರಿಯಸ್ ಯುವಕನ...

ಮಂಗಳೂರು ; ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ; ನಾಪತ್ತೆಯಾದ ಯುವತಿ ನಟೋರಿಯಸ್ ಯುವಕನ ಜೊತೆ ಪತ್ತೆ,ಪೋಷಕರಿಂದ ದೂರು.

ಮಂಗಳೂರು : ದ.ಕ ಜಿಲ್ಲೆಯಲ್ಲಿ ಲವ್ ಜಿಹಾದ್ ನಂತಹ ಪ್ರಕರಣಗಳು ಹೆಚ್ಚುತ್ತಿದ್ದು ಜಿಲ್ಲೆಯಲ್ಲಿ ಹೆಣ್ಣು ಮಕ್ಕಳನ್ನು ಹೆತ್ತ ಪೋಷಕರಿಗೆ ತಲೆನೋವಾಗಿದೆ.

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ಕಾರ್ಯಚರಣೆ ನಡೆಸಿದ ಪಾಂಡೇಶ್ವರ ಠಾಣಾ ಪೊಲೀಸರು, ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಮಾಡಿದ್ದಾರೆ.

ಹಲವು ದಿನಗಳಿಂದ ಕಾಣೆಯಾದ ಯುವತಿ ನಟೋರಿಯಸ್ ಮುಸ್ಲಿಂ ಯುವಕ ಮಹಮ್ಮದ್ ಅಶ್ಪಕ್ ಜೊತೆ ಇದ್ದಾಳೆಂಬ ಮಾಹಿತಿ ದೊರೆತಿದೆ. ಮಹಮ್ಮದ್ ಅಶ್ಪಕ್ ನಟೋರಿಯಸ್ ಹಿನ್ನಲೆ ಹೊಂದಿದವನು ಎಂದು ತಿಳಿದುಬಂದಿದ್ದು ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು, ಈತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಹಿಂದೂ ಯುವತಿಯರ ಮತಾಂತರ ‘ಲವ್ ಜಿಹಾದ್’ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರಬೇಕಾಗಿದೆ ಎಂದು ವಿಶ್ವಹಿಂದೂ ಪರಿಷದ್‌ ಶರಣ್ ಪಂಪ್ವೆಲ್‌ ಹೇಳಿದ್ದಾರೆ.

ಈ ಸಂಬಂಧ ಯುವತಿ ತಂದೆ ಮತಾಂತರ ಮಾಡಲಾಗಿದೆ ಎಂದು ದೂರು ನೀಡಿದ್ದು, ಈ ಬಗ್ಗೆ ಪೊಲಿಸರು ಏನೆಲ್ಲಾ ಕ್ರಮಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ. ಒಟ್ಟಿನಲ್ಲಿ ಲವ್ ಜಿಹಾದ್ ಹಿಂದೆ ಕಾಣದ ಕೈಗಳು ಕೆಲಸಮಾಡುತ್ತಿವೆ ಎಂದು ಸ್ಪಷ್ಟವಾಗಿ ತಿಳಿದುಬರುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular