Thursday, June 4, 2026
Flats for sale
Homeಜಿಲ್ಲೆಮಂಗಳೂರು : ಮತದಾರರ ಪಟ್ಟಿಯ (SIR) ವಿಶೇಷ ಸಮಗ್ರ ಪರಿಷ್ಕರಣೆಗೆ ದಕ್ಷಿಣ ಕನ್ನಡ ಸಜ್ಜು ;...

ಮಂಗಳೂರು : ಮತದಾರರ ಪಟ್ಟಿಯ (SIR) ವಿಶೇಷ ಸಮಗ್ರ ಪರಿಷ್ಕರಣೆಗೆ ದಕ್ಷಿಣ ಕನ್ನಡ ಸಜ್ಜು ; ಜೂನ್ 30ರಿಂದ ಮನೆ-ಮನೆಗೆ BLO ಭೇಟಿ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್.

ಮಂಗಳೂರು : ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್ ರವರು ತಿಳಿಸಿದ್ದಾರೆ.

2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಪರಿಷ್ಕರಣೆ ನಡೆಯಲಿದೆ. ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ ಸಂಗ್ರಹಿಸಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದ್ದು, ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 3ರಂದು ಪ್ರಕಟಿಸಲಾಗುವುದು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 18,05,189 ಮತದಾರರಿದ್ದು, ಅವರಲ್ಲಿ 15,98,723 ಮತದಾರರ ವಿವರಗಳನ್ನು ಈಗಾಗಲೇ ಮ್ಯಾಪಿಂಗ್ ಮಾಡಲಾಗಿದೆ. ಇದು ಶೇ.88.56ರಷ್ಟು ಪ್ರಗತಿಯನ್ನು ಸೂಚಿಸುತ್ತದೆ. ಪರಿಷ್ಕರಣೆ ಪ್ರಕ್ರಿಯೆಯಲ್ಲಿ 8 ಮತದಾರರ ನೋಂದಣಾಧಿಕಾರಿಗಳು, 10 ಸಹಾಯಕ ಮತದಾರರ ನೋಂದಣಾಧಿಕಾರಿಗಳು, 206 BLO ಮೇಲ್ವಿಚಾರಕರು ಹಾಗೂ 1,876 BLOಗಳು ಕಾರ್ಯನಿರ್ವಹಿಸಲಿದ್ದಾರೆ.

ಮತದಾರರು BLOಗಳು ನೀಡುವ Enumeration Form ಅನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ. ಜನನ ಪ್ರಮಾಣಪತ್ರ, ಪಾಸ್‌ಪೋರ್ಟ್, ಶೈಕ್ಷಣಿಕ ಪ್ರಮಾಣಪತ್ರ, ಖಾಯಂ ನಿವಾಸ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಸೇರಿದಂತೆ ಮಾನ್ಯ ದಾಖಲೆಗಳನ್ನು ಸಲ್ಲಿಸಬಹುದು.
ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ನೋಡಿಕೊಳ್ಳುವುದು ಈ ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಮತದಾರರು BLOಗಳ ಮನೆ-ಮನೆ ಭೇಟಿ ಸಂದರ್ಭದಲ್ಲಿ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular