Saturday, March 14, 2026
Flats for sale
Homeಜಿಲ್ಲೆಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ ..!

ಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ ..!

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್ ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 11 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ.

ದೆಹಲಿಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಕೋರಿಯರ್ ಮೂಲಕ ತರಿಸಿಕೊಂಡು ಮಂಗಳೂರಿಗೆ ತಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಸುಳ್ಯ ಪೆರುವಾಜೆ ಗ್ರಾಮ ನಿವಾಸಿ ಮೊಹಮ್ಮದ್ ಅಶ್ರಪ್ ಅಲಂತಡ್ಕ(50) ಎಂದು ತಿಳಿದಿದೆ.ಆರೋಪಿಯಿಂದ 1 ಲಕ್ಷ ಮೌಲ್ಯದ 11 ಗ್ರಾಂ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್-1, ಹೊಂಡಾ ಅಕ್ಟಿವಾ ಸ್ಕೂಟರ್ ಸಹಿತ ಒಟ್ಟು ರೂ. 1,60,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ಐ ಮೋಹನ್ ಕೆ ವಿ, ರಾಮ ಹಾಗೂ ಸಿಸಿಬಿ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular