ಮಂಗಳೂರು : ಮನೆಯೊಳಗೆ ಏಕಾಏಕಿ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಗರದ ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.
ಮೂಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದ್ದು, ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಬೋನ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದೆ.
ಸದಾನಂದ ಕೋಟ್ಯಾನ್‌ರ ಮನೆಯ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದೆ. ಈ ವೇಳೆ ನಾಯಿ ಬೊಗಳಲು ಆರಂಭಿಸಿದ್ದು, ಮನೆಮಂದಿ ಚಿರತೆ ನೋಡಿ ಕಂಗಾಲಾಗಿದ್ದಾರೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಮುಂಭಾಗ ಬಾಗಿಲಿಗೆ ಬೋನ್ಅ ಳವಡಿಸಿದರು. ಸುಮಾರು ೫ ಗಂಟೆಗಳ ಬಳಿಕ ಚಿರತೆ ಬೋನಿನೊಳಗೆ ಬಿದ್ದಿದ್ದು ಸ್ಥಳೀಯರು ನಿಟ್ಟಿಸುರು ಬಿಟ್ಟಿದ್ದಾರೆ.


