Thursday, July 23, 2026
Homeಜಿಲ್ಲೆಮಂಗಳೂರು : ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ,ಆರೋಪಿ ಪೊಲೀಸ್ ವಶಕ್ಕೆ.

ಮಂಗಳೂರು : ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ,ಆರೋಪಿ ಪೊಲೀಸ್ ವಶಕ್ಕೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದ ಘಟನೆ ವರದಿಯಾಗಿದೆ . ಕಿರಾತಕನೋರ್ವ ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಹಾಕಿ ಪರಾರಿಯಾಗಲು ಯತ್ನಿಸಿದ್ದಾನೆ. ಆ್ಯಸಿಡ್ ದಾಳಿ ಮಾಡಿದ ಯುವಕನನ್ನು ಕೇರಳ ಮೂಲದ ಅಬೀನ್ ಎಂದು ತಿಳಿದುಬಂದಿದೆ. ಪರಾರಿಯಾಗುತ್ತಿದ್ದ ಆರೋಪಿ ಅಬೀನ್ ಯನ್ನು ಕಡಬ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಗೆ ಒಳಗಾದ ವಿದ್ಯಾರ್ಥಿನಿಯರನ್ನು ಅಲೀನಾ ಸಿಬಿ,ಅರ್ಚನಾ,ಅಮೃತ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದೆ, ಆರೋಪಿ ಕೇರಳ ಮೂಲದವ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ.

ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ .

RELATED ARTICLES

LEAVE A REPLY

Please enter your comment!
Please enter your name here

Most Popular