ಮಂಗಳೂರು : ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಭಾನುವಾರ ತೆಂಕ ಯಡಪದವು ಗೋಪಾಲ ಕೃಷ್ಣ ದೇವಸ್ಥಾನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾರೆ.
ತೆಂಕ ಯಡಪದವು ಗೋಪಾಲ ಕೃಷ್ಣ ದೇವಸ್ಥಾನದ ಬಳಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ರಾಜೇಶ್ ನಾಯ್ಕ್ ಅವರು ಕಾಲ್ನಡಿಗೆಯಲ್ಲಿ ರಸ್ತೆ ದಾಟುತ್ತಿದ್ದಾಗ ಮಧ್ಯಾಹ್ನ 1:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಶಾಸಕರಿಗೆ ಢಿಕ್ಕಿ ಹೊಡೆದಿದ್ದು, ಕಾರು ನಿಲ್ಲಿಸದೆ ಸ್ಥಳದಿಂದ ತೆರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.
112 ಹೊಯ್ಸಳ ಪೊಲೀಸ್ ತಂಡ ಗುರುಪುರ ಜಂಕ್ಷನ್‌ನಲ್ಲಿ ಕಾರನ್ನು ಅಡ್ಡಗಟ್ಟಿ ಠಾಣೆಗೆ ತಂದಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಎರಡು ಮೊಣಕಾಲುಗಳಿಗೆ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತ್ಯಕ್ಷದರ್ಶಿಗಳ ದೂರಿನ ಆಧಾರದ ಮೇಲೆ, ಕಾರು ಚಾಲಕನ ವಿರುದ್ಧ ಕಲಂ 279, 337 ಐಪಿಸಿ, 134 (ಎ) (ಬಿ) ಅಡಿಯಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ


