ಮಂಗಳೂರು : ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆಯು 29 ಏಪ್ರಿಲ್ 2025 ರಂದು ಮಂಗಳವಾರ ಬೋಂದೆಲ್ ನ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದೆ, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಚಿನ್ಹೆಗಳಾದ ಮಂಗಳಸೂತ್ರ, ಜನಿವಾರ ಗಳನ್ನೂ ತೆಗೆದು ಪರೀಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ರೀತಿಯ ಆದೇಶ ಸರಿಯಲ್ಲ, ಇತ್ತೀಚಿಗೆ CET ಪರೀಕ್ಷೆ ಬರೆಯುವ ಸಂಧರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆ ದಕ್ಕೆಯಾಗಿದ್ದು, ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಪವಿತ್ರ ಜನಿವಾರವನ್ನು ಕಿತ್ತುಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗುತ್ತದೆ, ಹಿಂದೂ ಬಹುಸಂಖ್ಯಾತ ನಮ್ಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮನವಿಮಾಡಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ, ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ.


