Thursday, July 23, 2026
Homeಜಿಲ್ಲೆಮಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವಿಗೆ ಕೈಜೋಡಿಸಿ : ಮಾಜಿ ಕೇಂದ್ರ ಸಚಿವ...

ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವಿಗೆ ಕೈಜೋಡಿಸಿ : ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.

ಬಳಿಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಇಂದು ಚಾಲನೆ ನೀಡಲಾಯಿತು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಗೆಲುವಿಗೆ ಶುಭಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರೆ ಪ್ರತಿಭಾ ಕುಳಾಯಿ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular