Thursday, November 6, 2025
Flats for sale
Homeಜಿಲ್ಲೆಮಂಗಳೂರು : ವರುಣನ ಆರ್ಭಟ : ಮಳೆಗಾಲ ಮುಗಿಯುವವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟ್ರೆಕ್ಕಿಂಗ್...

ಮಂಗಳೂರು : ವರುಣನ ಆರ್ಭಟ : ಮಳೆಗಾಲ ಮುಗಿಯುವವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧ.

ಮಂಗಳೂರು : ಕಳೆದ ಹಲವು ದಿನಗಳಿಂದ ಸುರಿಯುವ ಭಾರಿ ಮಳೆಗೆ ಕರಾವಳಿ ಭಾಗದಲ್ಲಿ ಜನಜೀವನ ಅಸ್ಥವ್ಯಸ್ಥವಾಗಿದ್ದು ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅದರಂತೆ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ. ಇನ್ನು ಆದೇಶ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular