ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವಿನ ನಗೆ ಬೀರಿದ್ದಾರೆ.
ಇಂದು ಮುಂಜಾನೆಯಿಂದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿತ್ತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 5092 ಜನಪ್ರತಿನಿದಿಗಳು ಚುನಾವಣೆಯಲ್ಲಿ ಮತ ಚಲಾಯಿಸಿದ್ದರು. ಪ್ರಥಮ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಮತಗಳ ಅಂತರದಿಂದ ಮನ್ನಡೆಯಲ್ಲಿ ಜಯಗಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ತೆರವಾಗಿದ್ದ ಈ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ರಾಜು ಪೂಜಾರಿ ಸ್ಪರ್ಧಿಸಿದ್ದರು. ಕಿಶೋರ್ ಕುಮಾರ್ ಬೊಟ್ಯಾಡಿ ಅವರ ಗೆಲುವಿಗೆ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ವಿಧಾನ ಪರಿಷತ್ ಮತ ಎಣಿಕೆ
BJP- 3654
Congress- 1957
SDPI-195