Thursday, August 6, 2026
Homeಜಿಲ್ಲೆಮಂಗಳೂರು : ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು.

ಮಂಗಳೂರು : ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು.

ಮಂಗಳೂರು : ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಬುಧವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ರಿಕ್ಷಾ ಚಾಲಕ ಬೊಳ್ಳಾರು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ.

ಆಟದ ವೇಳೆ ಏಕಾಏಕಿ ಕುಸಿದು ಬಿದ್ದ ಲಿಖಿತ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಘಟನೆಯಿಂದ ಶಾಲೆ ಹಾಗೂ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular