Wednesday, November 5, 2025
Flats for sale
Homeಜಿಲ್ಲೆಮಂಗಳೂರು : ಜೆರೋಸಾ ಶಾಲೆಯ ಪ್ರಕರಣ: ಬಿಜೆಪಿ ಶಾಸಕ ವೇದವ್ಯಾಸ ಕಾಮತ್,ಶಾಸಕ ಭರತ್ ಶೆಟ್ಟಿ ವಿರುದ್ಧ...

ಮಂಗಳೂರು : ಜೆರೋಸಾ ಶಾಲೆಯ ಪ್ರಕರಣ: ಬಿಜೆಪಿ ಶಾಸಕ ವೇದವ್ಯಾಸ ಕಾಮತ್,ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು.

ಮಂಗಳೂರು : ಶ್ರೀ ರಾಮದೇವರಿಗೆ ಮಾಡಿದ ಅವಹೇಳನ ದಿನಕ್ಕೊಂದು ತಿರುವು ಪಡೆಯುತ್ತಿದ್ದು ಮೊದಲನೆಯದಾಗಿ ತಪ್ಪು ಒಪ್ಪಿಕೊಂಡ ಜೆರೋಸಾ ಶಾಲೆಯ ಆಡಳಿತ ಮಂಡಳಿ ಇದೀಗ ಮಂಗಳೂರು ಧರ್ಮಪ್ರಾಂತ್ಯ ಶಿಕ್ಷಕಿಯ ಮೇಲೆ ಸುಳ್ಳು ಆರೋಪಿಸಲಾಗಿದೆ ಎಂದು ಕಳವಳ ವ್ಯಕ್ತ ಪಡಿಸಿದ ನಂತರ ಶಾಲೆಯ ಆಡಳಿತ ಯು ಟರ್ನ್ ಹೊಡೆದಿದೆ .

ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ದಾಖಲಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್​ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಹೆಸರು ಉಲ್ಲೇಖಿಸಲಾಗಿದ್ದು,ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಭರತ್ ಕುಮಾರ್, VHP ಮುಖಂಡ ಶರಣ್ ಪಂಪ್​ವೆಲ್ ಸೇರಿದಂತೆ ಹಲವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 153A, 295A, 505(2), 506, 149ರಡಿ ಕೇಸ್ ದಾಖಲಾಗಿದೆ. ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು FIRನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ,ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ,ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಲಾಗಿದ್ದು.ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular