Friday, March 13, 2026
Flats for sale
Homeಜಿಲ್ಲೆಮಂಗಳೂರು ; ಸಿಸಿಬಿ ಪೊಲೀಸರ ಕಾರ್ಯಾಚರಣೆ : ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ, 3...

ಮಂಗಳೂರು ; ಸಿಸಿಬಿ ಪೊಲೀಸರ ಕಾರ್ಯಾಚರಣೆ : ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ, 3 ಆರೋಪಿಗಳ ಬಂಧನ…!

ಮಂಗಳೂರು ; ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ 3 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿರುತ್ತಾರೆ.

ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಮಸೂದ್ ಎಂಕೆ (45) ಮೊಹಮ್ಮದ್ ಸುಬೇರ್,ಮೊಹಮ್ನದ್ ಆಶೀಕ್ ಎಂದು ತಿಳಿದಿದೆ.

ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದ್ದು ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರ ಪೊಲೀಸರಿಂದ ನಿರಂತರವಾಗಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯು ಮುಂದುವರೆದಿರುತ್ತಿದ್ದು ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular