Saturday, January 17, 2026
Flats for sale
Homeಜಿಲ್ಲೆಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕರಿಗೆ-ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರ...

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕರಿಗೆ-ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರ ಬಂಧನ.

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಅವರಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಅಡ್ಯಾರ್ ನಿವಾಸಿ ಆಟೋ ಚಾಲಕ ಅಬ್ದುಲ್ ಸಲಾಮ್ ಪ್ರಾಯ ೩೯ ಹಾಗೂ ಉಳ್ಳಾಲ ನಿವಾಸಿ ಮೊಹಮ್ಮದ್ ನಾಸೀರ್ ಎಂದು ತಿಳಿದುಬಂದಿದೆ.

ಆಟೋ ಚಾಲಕ ಅಬ್ದುಲ್ ಸಲಾಮ್ ಮಂಗಳೂರು ನಗರದ ಬಂದರು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಈತನಿಂದ ರೂ. 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500/- ಮೌಲ್ಯದ ಸೊತ್ತುಗಳನ್ನು ವಶಪಡಿಸಕೊಳ್ಳಲಾಗಿದೆ.ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಉಳ್ಳಾಲ ನಿವಾಸಿ ಮೊಹಮ್ಮದ್ ನಾಸೀರ್ ಎಂಬಾತ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದು ಆತನಿಂದ ರೂ. 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತು ಎಂಡಿಎಂಎ, ಕಪ್ಪು ಬಣ್ಣದ ಯಮಹಾ ಯಮಹಾ FZ ಬೈಕ್, ಮೊಬೈಲ್ ಪೋನ್, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,05,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular