ಮಂಗಳೂರು ; ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ತಯಾರಿ ಮತ್ತು ಸಂಚು, ಮುಂತಾದ ಅಪರಾಧಗಳಿಗೆ ಸಂಬಂಧಿಸಿದ ಸುಮಾರು 21 ಪ್ರಕರಣಗಳಲ್ಲಿ ಭಾಗಿಯಾಗಿ, ಸುಮಾರು 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಹಳೆಯಂಗಡಿ ವಿಲೇಜ್ ನಿವಾಸಿ ಕುಖ್ಯಾತ ರೌಡಿಶೀಟರ್, ಸಜ್ವಾನ್ ಹುಸೈನ್ (42) ಎಂದು ತಿಳಿದುಬಂದಿದೆ.
ಈತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ ದಿನಾಂಕ 28-02-2020 ರಂದು ಮಾನ್ಯ ಹೈಕೋರ್ಟ್ ನಲ್ಲಿ ಬೇವಾವಧಿ ಶಿಕ್ಷೆಗೆ ಒಳಗಾಗಿರುತ್ತಾನೆ ಅಲ್ಲದೇ, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ದರೋಡೆ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ 3 ವರ್ಷ ಶಿಕ್ಷೆಗೆ ಒಳಗಾಗಿರುತ್ತಾನೆ. ಈತನ ವಿರುದ್ಧ 13 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದು, ನ್ಯಾಯಾಲಯದಿಂದ ದಸ್ತಗಿರಿ ವಾರೆಂಟ್ ಗಳನ್ನು ಹೊರಡಿಸಲಾಗಿದೆ. 05 ಪ್ರಕರಣಗಳಲ್ಲಿ ನ್ಯಾಯಾಲಯವು ಎಲ್.ಪಿ.ಸಿ ಎಂದು ಘೋಷಿಸಲಾಗಿದೆ.
2017 ನೇ ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನು ತನ್ನ ಸಹಚರರೊಂದಿಗೆ ಸೇರಿಕೊಂಡು ಲೆಕ್ಕಿ ಸಹ್ವಾನ್ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ, ಕೊಲೆ ಮಾಡಿ ಆಗುಂಬೆ ಘಾಟಿಯಲ್ಲಿ ಎಸೆದ ಪ್ರಕರಣದಲ್ಲಿ ನೇರ ಭಾಗಿಯಾಗಿ ಬಳಿಕ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಂಡಿದ್ದನು. ಬಳಿಕ ಅಂದ್ರಪ್ರದೇಶದ ರಾಯ್ ಚೋಟೆ ಪ್ರದೇಶದಲ್ಲಿ ತನ್ನ ಹೆಸರನ್ನು. ಉಮ್ಮರ್ ಮೊಹಮ್ಮದ್ ನಾಸಿರ್ ಎಂದು ಬದಲಿಸಿ, ನಕಲಿ ಹೆಸರಿನಲ್ಲಿ ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮಾಡಿಸಿಕೊಂಡು. 2018 ರಿಂದ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದನು. ವಿದೇಶಗಳಲ್ಲಿನ ಮಂಗಳೂರು ಮೂಲದ ವಾಪಾರಸ್ಥರುಗಳಿಗೆ ಸಹ ಬಲ ಹಣ (Extortion) ಮಾಡಿದ ಬಗ್ಗೆ ದೂರುಗಳು ಬಂದಿದ್ದವು.
ಆರೋಪಿ ಸಪ್ತಾನ್ ಹುಸೈನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಅಂಧ್ರಪ್ರದೇಶ ರಾಯಚೋಟೆಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮುಲ್ಕಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಆರೋಪಿ ಸಬ್ಬಾನ್ ಹುಸೈನ್ ಗೆ ತಲೆಮರೆಸಿಕೊಳ್ಳಲು. ನಕಲಿ ದಾಖಲೆ, ಪಾಸ್ ಪೋರ್ಟ್ ತಯಾರಿಸಲು ಸಹಕರಿಸಿದ ಮತ್ತು ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆಮಾಡಿ ತನಿಖೆಗೆ ಒಳಪಡಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ನಗರ ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.


