ಮಂಗಳೂರು : ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ ಜನವರಿ 2 ರಂದು ರಾತ್ರಿ ಶರಣ್ ಮೇರಿಹಿಲ್‌ನಲ್ಲಿ ಕಾರು ಚಲಾಯಿಸುತ್ತಿದ್ದಾಗ ಆರೋಪಿಯನ್ನು ಹಿಡಿಯಲು ಯತ್ನಿಸಿದ ಸಮಯದಲ್ಲಿ ಆರೋಪಿ ಆಕಾಶ ಭವನ ಶರಣ್ ತಪ್ಪಿಸಿಕೊಳ್ಳುವ ಯತ್ನದಲ್ಲಿ ಶರಣ್ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ ಘಟನೆ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿ ಆಕಾಶಭವನ’ ಶರಣ್‌ನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಂಗಳವಾರ ನಡೆದಿದೆ. ಜೆಪ್ಪುವಿನ ಕುಡುಪಾಡಿ ಎಂಬಲ್ಲಿ ಗುಂಡಿನ ಚಕಮಕಿ ನಡೆದಿದೆ.
ಸದ್ಯ ಶರಣ್ ಅವರ ಕಾಲಿನ ಬುಲೆಟ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆಸ್ಪತ್ರೆಗೆ ಭೇಟಿ ನೀಡಿ ರೌಡಿ ಶೀಟರ್ ಶರಣ್ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಸಂಗ್ರಹಿಸಿದರು.
ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಪೋಕ್ಸೋ, ದರೋಡೆ, ಕಳ್ಳತನ ಮತ್ತು ಅತ್ಯಾಚಾರ ಪ್ರಕರಣಗಳು ಸೇರಿದಂತೆ 21 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಶರಣ್ ಕೆವಿಜಿ ಪಾಲಿಟೆಕ್ನಿಕ್ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.
ಆಕಾಶಭವನ ಶರಣ್ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆತನ ವಿರುದ್ಧ ಮಂಗಳೂರು ಮತ್ತು ಉಡುಪಿಯಲ್ಲಿ ಕೊಲೆ, ಕೊಲೆ ಯತ್ನ, ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಹಫ್ತಾ ವಸೂಲಿ ಸೇರಿದಂತೆ 21 ಆರೋಪಗಳು ದಾಖಲಾಗಿವೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ರೇಣುಕಾ ಪ್ರಸಾದ್ ಸೇರಿದಂತೆ ಐವರಿಗೆ ಕರ್ನಾಟಕ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೊಲೆಯ ಸಹಚರ ಎಂದು ಗುರುತಿಸಲಾದ ಶರಣ್ ಪರಾರಿಯಾಗಿದ್ದ ಕಾರಣ ಶಿಕ್ಷೆಯಿಂದ ಪಾರಾಗಿದ್ದನು,ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಇಂದು ಮುಂಜಾನೆ ಆಕಾಶಭವನ ಶರಣ್ ನ್ನು ಬಂಧಿಸಿ ಅಜ್ಞಾತ ಸ್ಥಳದಲ್ಲಿ ಹೊತ್ತೊಯ್ದಿದ್ದಾರೆ ಎಂಬುದು ಬಲ್ಲ ಮೂಲಗಳಿಂದ ಮಾಹಿತಿ.


