ಮಂಗಳೂರು : ಇಲ್ಲಿನ ಸ್ಟೇಟ್ ಬ್ಯಾಂಕ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಬಳಿ ಖಾಸಗಿ ಬಸ್ ಕಂಡಕ್ಟರ್ ಮೃತದೇಹ ಪತ್ತೆಯಾಗಿದ್ದು, ಕೊಲೆಯಾಗಿರುವಂತೆ ಕಂಡುಬಂದಿದೆ.
ಮೃತರನ್ನು ರಾಜೇಶ್ (30) ಎಂದು ಗುರುತಿಸಲಾಗಿದ್ದು, ಅವರು ಮಂಗಳೂರು ಮತ್ತು ವಿಟ್ಲದ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜೇಶ್ ರವರನ್ನು ಯಾರೋ ಹತ್ಯೆಗೈದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಸರಳ ಮತ್ತು ಸ್ನೇಹಪರ ವ್ಯಕ್ತಿಯಾಗಿದ್ದ ರಾಜೇಶ್ ಅವರು ಪ್ರತಿವರ್ಷ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.ರಾಜೇಶ್ ಅವರ ಊರು ಮತ್ತು ಸಂಬಂಧಿಕರು ಅವರ ಸಹೋದ್ಯೋಗಿಗಳಿಗೆ ತಿಳಿದಿಲ್ಲದಿರುವುದು ಕೆದಕರ. ಕಲ್ಲಿನಿಂದ ಹಲ್ಲೆ ನಡೆಸಿದ್ದರಿಂದ ಆತನ ದೇಹಕ್ಕೆ ತೀವ್ರ ಗಾಯವಾಗಿದ್ದು ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.