Saturday, July 25, 2026
Homeದೇಶಮಂಗಳೂರು ; ಹವಾಲಾ ಹಣ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ NIA ದಾಳಿ, ಹಲವಾರು ವಶಕ್ಕೆ.

ಮಂಗಳೂರು ; ಹವಾಲಾ ಹಣ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ NIA ದಾಳಿ, ಹಲವಾರು ವಶಕ್ಕೆ.

ಮಂಗಳೂರು : ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯ 16 ಸ್ಥಳಗಳಲ್ಲಿ ಮೇ 31ರ ಬುಧವಾರ ಮುಂಜಾನೆ ಎನ್‌ಐಎ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಗರ ಹಾಗೂ ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳ ಸೇರಿದಂತೆ ವಿವಿಧೆಡೆ ಏಕಕಾಲಕ್ಕೆ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ.

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ.

ಜುಲೈ 12, 2022 ರಂದು ಬಿಹಾರದ ರ್ಯಾಲಿಯಲ್ಲಿ ಪಿಎಂ ಮೋದಿಯವರ ಮೇಲೆ ದಾಳಿ ಮಾಡಲು ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಚಿನ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular