ಮಂಗಳೂರು ; ಮೇ 01 ರಂದು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾನ್ ಶೆಟ್ಟಿ ಮೇಲೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀರ್ವ ಹಲ್ಲೆ ನಡೆಸಿ ಕೊಲೆ ಪ್ರಕರಣಕ್ಕೆ ಸಂಭಂದಿಸಿದಂತೆ ವಿಶ್ವ ಹಿಂದೂ ಪರಿಷತ್ ದ.ಕ ಬಂದ್ ಗೆ ಕರೆ ಕೊಟ್ಟಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾದ ಹಿನ್ನೆಲೆ.ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು ಅದುದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಶ್ ವ್ಯಾಪ್ತಿಯಲ್ಲಿ ಮೇ 02 ರಂದು ದ.ಕ ಜಿಲ್ಲೆ ಬಂದ್ ಗೆ ಕರೆಕೊಟ್ಟಿದೆ. ಬೆಳಿಗ್ಗೆ 06-00 ಗಂಟೆಯಿಂದ ದಿನಾಂಕ: 06 ರ ಬೆಳಿಗ್ಗೆ 06-00 ಗಂಟೆಯ ವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ನಗರ ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.


