Sunday, March 15, 2026
Flats for sale
Homeಜಿಲ್ಲೆಮಂಗಳೂರು : ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆಯಾಜ್ಞೆ.

ಮಂಗಳೂರು : ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆಯಾಜ್ಞೆ.

ಪುತ್ತೂರು : ಹಿಂದೂ ಜಾಗರಣಾ ವೇದಿಕೆ ಮುಖಂಡರಾದ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದ ಘಟನೆ ವರದಿಯಾಗಿದೆ.

ಕರ್ನಾಟಕ ಪೊಲೀಸ್​ ಕಾಯ್ದೆ ಕಲಂ 55 ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್​ ಠಾಣಾ ವ್ಯಾಪ್ತಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್​ ಜಾರಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿರುವ ಉಪವಿಭಾಗೀಯ ದಂಡಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.ಹಾಗೆ ನೀವು ಸತ್ವಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ಈ ಕುರಿತು ವಾದಿಸಬಹುದು ಎಂದು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್​ ಪತ್ರದಲ್ಲಿ ತಿಳಿಸಿದ್ದರು.ಸರಕಾರ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ಕೂಡ ನಡೆದಿತ್ತು.

ಅರ್ಜಿದಾರರ ಪರವಾದ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಗಡಿಪಾರು ನೊಟೀಸ್​ಗೆ ತಡೆಯಾಜ್ಞೆ ನೀಡಿದ್ದಾರೆ. ಅರ್ಜಿದಾರರ ಪರ ವಕೀಲ ಮಹೇಶ್ ಕಜೆ ಅವರು ವಾದಿಸಿ, ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನ ಸೆಳೆದಿದ್ದಾರೆ . ಹಾಗೆ ಆಪಾದಿತರ ವಿರುದ್ಧದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬಾತನಿಗೆ ಹಾಗೂ ಎಂಟು ಮಂದಿ ಪುತ್ತೂರು ಬರಂಗದಳ ಕಾರ್ಯಕರ್ತರಿಗೆ ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular