Saturday, July 18, 2026
Homeಜಿಲ್ಲೆಮಂಡ್ಯ : ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ !

ಮಂಡ್ಯ : ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ !

ಮಂಡ್ಯ ; ಜೀವನದಲ್ಲಿ ಜಿಗುಪ್ಸೆ ಗೊಂಡ ಮಹಿಳೆಯೋರ್ವಳು ತನ್ನ ಮೂವರು ಪುಟ್ಟ ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.

ಉಸ್ನಾ ಕೌಸರ್ ಎಂಬಾಕೆ ತನ್ನ ಮೂವರು ಮಕ್ಕಳಾದ ಹಾರಿಸ್‌(7), ಆಲಿಸಾ(4), ಫಾತಿಮಾ(2)ಗೆ ವಿಷವುಣಿಸಿ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪತಿ ಅಖಿಲ್‌ ಅಹ್ಮದ್ ಜೊತೆ ಮನಸ್ತಾಪ ಉಂಟಾದ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದಾಳೆಂದು ತಿಳಿಯಲಾಗಿದೆ.ಉಸ್ನಾ ಕೌಸರ್ ನರ್ಸಿಂಗ್ ಕೆಲಸಕ್ಕೆ ಹೋಗುತ್ತಿದ್ದರು‌. ಈಕೆಗೆ .ಪತಿ ಈಕೆಯ ಜೊತೆ ಯಾವಾಗಲೂ ಜಗಳವಾಡುತ್ತಿದ್ದ ಎನ್ನಲಾಗಿದೆ.

ಈ ಘಟನೆಯಿಂದ ಇಡೀ ಜಿಲ್ಲೆ ಬೆಚ್ಚಿ ಬೀದ್ದಿದೆ .ಗಂಡನ ಕಿರುಕುಳ ತಾಳಲಾದಗೆ ಇಂತಹ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ಕೌಟುಂಬಿಕ ಕಲಹಕ್ಕೆ ಬೇಸತ್ತು ಉಸ್ನಾ ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನ ಮೂರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ಸ್ಥಳಕ್ಕೆ ಮದ್ದೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular