Thursday, July 23, 2026
Homeಜಿಲ್ಲೆಮಂಡ್ಯ : ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ - RSS ಮುಖಂಡ ಕಲ್ಲಡ್ಕ...

ಮಂಡ್ಯ : ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ – RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌‌ಗೆ ಜಾಮೀನು.

ಮಂಡ್ಯ : “ಮುಸ್ಲಿಂ ಮಹಿಳೆಯರು ದಿನಕ್ಕೊಬ್ಬ ಗಂಡಂದಿರನ್ನು ಹೊಂದಿದ್ದಾರೆ. ಅವರಿಗೆ ಶಾಶ್ವತ ಗಂಡಂದಿರಿಲ್ಲ. ಮುಸ್ಲಿಂ ಹುಡುಗಿಯರು ಮತ್ತು ಮುಸ್ಲಿಂ ಹುಡುಗರು ಮೋಸ ಮಾಡುತ್ತಿದ್ದಾರೆ. ಲವ್ ಜಿಹಾದ್ ಮಾಡುತ್ತಿದ್ದಾರೆ ಎಂದು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ಗೆ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಪ್ರಭಾಕರ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ನ್ಯಾಯಾಲಯ, ಇಂದು ಜಾಮೀನು ನೀಡಿ ಆದೇಶ ಹೊರಡಿಸಿದೆ.

ಮಂಡ್ಯದಲ್ಲಿ ಹನುಮ ಸಂಕೀರ್ತನಾ ಯಾತ್ರೆ ವೇಳೆ ವಿವಾದಿತ ಭಾಷಣ ಮಾಡಿದ್ದ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ದೂರು ಆಧರಿಸಿ ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿಯ ವಿರುದ್ದ ಹಿರಿಯ ವಕೀಲ ಎಸ್ ಬಾಲನ್ ಅವರು ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಮಂಡಿಸಿದ್ದರು.

ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌

RELATED ARTICLES

LEAVE A REPLY

Please enter your comment!
Please enter your name here

Most Popular