Tuesday, March 17, 2026
Flats for sale
Homeರಾಜ್ಯಮಂಡ್ಯ : ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ಅನ್ನು ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು,ನಿಯಂತ್ರಣ ತಪ್ಪಿ ಬೈಕ್ ಪಲ್ಟಿ,3 ವರ್ಷದ...

ಮಂಡ್ಯ : ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ಅನ್ನು ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು,ನಿಯಂತ್ರಣ ತಪ್ಪಿ ಬೈಕ್ ಪಲ್ಟಿ,3 ವರ್ಷದ ಮಗು ಸಾವು..!

ಮಂಡ್ಯ : ಈ ಟ್ರಾಫಿಕ್ ಪೊಲೀಸರೇ ಈಗೆ ಹಣದ ಆಸೆಗಾಗಿ ತಮ್ಮ ಮನಬಂದಂತೆ ಅಹಂಕಾರದ ವರ್ತನೆಯಿಂದ ಬೈಕ್ ಗಳನ್ನೂ ಅಡ್ಡಗಟ್ಟುತ್ತಾರೆ ಇದರಿಂದ ಕೆಲವರು ಭಯದಿಂದ ಅಡ್ಡಾದಿಡ್ಡಿ ಚಲಾಯಿಸಿ ಅಪಘಾತಕ್ಕೆ ಒಳಗಾಗುತ್ತಾರೆ.

ಅದರಂತೆಯೇ ಮಂಡ್ಯದಲ್ಲಿ ಇಂದು ಒಂದು ಫ್ಘಟನೆ ನಡೆದಿದೆ ೩ ವರ್ಷದ ಹೃತೀಕ್ಷಗೆನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ಅನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಟೆಂಪೋ ಮಗು ಹೃತೀಕ್ ಮೇಲ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಮೂಲದ ಅಶೋಕ್ ಮತ್ತು ವಾಣಿ ದಂಪತಿ, ಮಗಳು ಹೃತೀಕ್ಷ ಮೃತ ದುರ್ದೈವಿ.ಕಣ್ಣೆದುರಲ್ಲೇ ಸಾವನ್ನಪ್ಪಿದ ಮಗುವನ್ನು ಪೋಷಕರು ರಸ್ತೆಯ ಮಧ್ಯೆ ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಇನ್ನು ಈ ದೃಶ್ಯವನ್ನು ಕಂಡು ಕಂಡ ಸಾರ್ವಜನಿಕರು ಮಮ್ಮಲ ಮರುಗಿದ್ದು, ಪೊಲೀಸರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಆಗಮಿಸಿ ಜಯರಾಮ್​, ನಾಗರಾಜ್​, ಗುರುದೇವ್ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಿದ್ದಾರೆ.ಒಟ್ಟಿನಲ್ಲಿ ಈ ಪೋಲೀಸರ ಮಾಮೂಲಿಗೆ ಬದುಕಿ ಬಾಳಬೇಕಾದ ಮಗು ಮೃತಪಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular